ಕಿಂಗ್‌ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್‌ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಜೊತೆಗೆ ನಂಜನಗೂಡಿನಿಂದ ಬಿಯರ್ ಸರಬರಾಜು ಆಗುವುದನ್ನು ಅಬಕಾರಿ ಅಧಿಕಾರಿಗಳು ತಡೆಹಿಡಿದಿದ್ದಾರೆ. ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.
ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್‌ಹೌಸ್ ಕೆಮಿಸ್ಟ್ ವರದಿ ನೀಡಿದ್ದು ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ ಕಿಂಗ್ ಫಿಶರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಜುಲೈ 15ರಂದು ನಂಜನಗೂಡಿನಲ್ಲಿ ಕೆಲವೇ ಕೆಲವು ಬಿಯರ್ ಬಾಟಲ್‌ಗಳಲ್ಲಿ ಸಣ್ಣ ಪ್ರಮಾಣದ ಮಬ್ಬು ಕಾಣಿಸಿಕೊಂಡಿತ್ತಷ್ಟೇ. ಇದರಿಂದ ಆರೋಗ್ಯಕ್ಕೆ ಅಪಾಯವಿಲ್ಲ. ನಾವು ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ಪಾರದರ್ಶಕತೆ ಮತ್ತು ಸಹಕಾರಕ್ಕೆ ಆದ್ಯತೆ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸುತ್ತಿದ್ದೇವೆ.
ನಮ್ಮ ಎಲ್ಲಾ ಉತ್ಪನ್ನಗಳು ನಿಗದಿತ ನಿಯಂತ್ರಕ ಮಾರ್ಗಸೂಚಿಗಳಿಗೆ ಬದ್ಧವಾಗಿರುತ್ತವೆ ಮತ್ತು ಉತ್ತಮ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಯುನೈಟೆಡ್ ಬ್ರಿವರೀಸ್ ಲಿಮಿಟೆಡ್‌ನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…