ಕರಾವಳಿ

ಮಾಣಿಲ ಶ್ರೀವರಮಹಾಲಕ್ಷ್ಮಿ ವೃತಾಚರಣೆಯ ಬೆಳ್ಳಿಹಬ್ಬ ಮಹೋತ್ಸವ : ಆ.20ರಂದು ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಮಾಣಿಲ ಶ್ರೀಧಾಮದಲ್ಲಿ ಆ.25ರವರೆಗೆ ನಡೆಯುವ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ ಹಾಗೂ ಆ.25 ರಿಂದ ಆ. 27ರವರೆಗೆ ಶ್ರೀವರಮಹಾಲಕ್ಷ್ಮಿ ವೃತಾಚರಣೆ ಬೆಳ್ಳಿ ಹಬ್ಬದ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಹೊರೆಕಾಣಿಕೆ ಸಮಿತಿ ನೇತೃತ್ವದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಆ.20ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಪುತ್ತೂರು ವಲಯ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ಮತ್ತು ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಮಾಣಿಲದಲ್ಲಿರುವ ಮಾಣಿಲ ಶ್ರೀ ದುರ್ಗಾ ಮಹಾಲಕ್ಷೀ ಕ್ಷೇತ್ರವು ನಾಡಿನೆಲ್ಲೆಡೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ನವೀಕರಣ, ಪುನರ್ ನಿರ್ಮಾಣ, ಜೀರ್ಣೋದ್ದಾರ ಕಾರ್ಯಗಳಿಗೆ ಮಾರ್ಗದರ್ಶನ ನೀಡಿ ಸಾಮಾನ್ಯನಂತೆ ಭಕ್ತರೊಡನೆ ಸ್ಪಂದಿಸುವ ಸಂತ ಯೋಗಿ ಕೌಸ್ತುಭ, ಸತ್ಕರ್ಮ ತಪಸ್ವಿ, ಪರಮಪೂಜನೀಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ತಪೋ ಭೂಮಿಯಾಗಿದೆ. ಶ್ರೀ ಸ್ವಾಮೀಜಿಯವರು ಸನಾತನ ಹಿಂದು ಧರ್ಮದ ಪುನರುಜ್ಞಾನಕ್ಕೆ ಹಾಗೂ ಹಿಂದು ಸಮಾಜದ ಏಳಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿರಿಸಿದ್ದಾರೆ. ದೀನ ದಲಿತರು ದುರ್ಬಲರಿಗೆ ದಾರಿದೀವಿಗೆಯಾಗಿದ್ದಾರೆ.
ಶ್ರೀ ಗಳ ಕ್ಷೇತ್ರದಲ್ಲಿ 48 ದಿನಗಳ ಕಾಲ ನಿರಂತರವಾಗಿ ಶ್ರೀವರಮಹಾಲಕ್ಷ್ಮಿ ವೃತಾಚರಣೆ ಪೂಜೆ ನಡೆಯುತ್ತಿದ್ದು, ಇದರ ಜೊತೆಗೆ 25 ವರ್ಷಗಳನ್ನು ಪೂರೈಸಿ ಬೆಳ್ಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಿಂದ ಬೃಹತ್ ಹೊರಕಾಣಿಕೆಯ ಜೊತೆಗೆ ದೇಣಿಗೆ ಸಮರ್ಪಿಸಬೇಕೆಂದು ಮಾಡಿದ ಸಂಕಲ್ಪದoತೆ ಆ.20ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದ ಗದ್ದೆಯಿಂದ ಬೃಹತ್ ಹೊರೆಕಾಣಿಕೆಯನ್ನು ಮೆರವಣಿಗೆ ಮೂಲಕ ಶ್ರೀಕ್ಷೇತ್ರಕ್ಕೆ ಒಪ್ಪಿಸಲಾಗುವುದು. ಈ ನಿಟ್ಟಿನಲ್ಲಿ ಆ.18ರಂದು ಹೊರೆಕಾಣೀಕೆ ಸ್ವೀಕೃತಿ ಕೌಂಟರ್ ತೆರೆಯಲಾಗುವುದು ಎಂದು ಭಕ್ತರು ಹೊರೆಕಾಣಿಕೆ ಸಮರ್ಪಣೆ ಮಾಡುವಂತೆ ಅವರು ವಿನಂತಿಸಿದರು.

ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆಯವರು ಮಾತನಾಡಿ ಹಿಂದು ಧಾರ್ಮಿಕ ಭಾವನೆಯಲ್ಲಿ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪೂರಕವಾಗಿ ಹೊರೆಕಾಣಿಕೆ ಸಮರ್ಪಣೆ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ 48 ದಿನಗಳ ಕಾಲ ನಡೆಯುವ ಪೂಜೆಯಲ್ಲಿ ಹಲವು ಖರ್ಚುಗಳಾಗುತ್ತದೆ. ಈನಿಟ್ಟಿನಲ್ಲಿ ಕ್ಷೇತ್ರಕ್ಕೆ ಪುತ್ತೂರು ಸಮಿತಿಯಿಂದ ರೂ. 5ಲಕ್ಷವನ್ನು ಆರ್ಥಿಕ ರೂಪದಲ್ಲಿ ನೀಡಲಾಗುತ್ತದೆ. ಉಳಿದಂತೆ ಇಲ್ಲಿ ಯಾರಿಗೂ ಹೊರೆಯಾಗದ ರೀತಿಯಲ್ಲಿ ಹೊರೆಕಾಣಿಕೆ ಸ್ವೀಕರಿಸಲಾಗುವುದು. ಭಕ್ತರು ಮತ್ತು ಕ್ಷೇತ್ರದ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಹೊರೆಕಾಣಿಕೆ ಸಮರ್ಪಣೆ ಮಾಡುವಂತೆ ವಿನಂತಿಸಿದ ಅವರು ಆ.18ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯ ಬಳಿಯಲ್ಲಿ ಹೊರೆಕಾಣಿಕೆ ಸ್ವೀಕೃತಿಯ ಕೌಂಟರ್ ತೆರೆಯಲಾಗುವುದು ಎಂದು ಅವರು ತಿಳಿಸಿದರು.

ಮಾಣಿಲ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಪುತ್ತೂರಿನಲ್ಲಿ ಹಲವು ಧಾರ್ಮಿಕ ಕ್ಷೇತ್ರ ಮತ್ತು ಮಠ ಮಂದಿಗಳ ಜೀರ್ಣೋದ್ದಾರ ಕಾರ್ಯದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಭಾಗವಹಿಸಿದವರು. ಇದೀಗ ಶ್ರೀ ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಪುತ್ತೂರು ಕ್ಷೇತ್ರದ ಭಕ್ತರು ಸಹಕಾರ ನೀಡುವಂತೆ ವಿನಂತಿಸಿಕೊoಡಿದ್ದಾರೆ.
ಇನ್ನೂ ಸುದ್ದಿಗೋಷ್ಠಿಯಲ್ಲಿ ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಹೊರೆಕಾಣಿಕೆ ಸಮಿತಿ ಪುತ್ತೂರು ವಲಯ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ಲಕ್ಷ್ಮಣ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago