ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ವಿದ್ಯಾ ನಿಧಿ ಸಮಿತಿ ವತಿಯಿಂದ ಶಿಮಂತೂರು ಗ್ರಾಮ ವ್ಯಾಪ್ತಿಯ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಆಶೀರ್ವಚನ ನೀಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಪಡೆದು ಸಾಧಕರಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಶಿಕ್ಷಣ ಪ್ರೋತ್ಸಾಹ ನೀಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಿದ್ಯಾನಿಧಿ ಸಮಿತಿ ಪ್ರಾರಂಭಿಸಲಾಗಿದ್ದು, ದಾನಿಗಳ ಸಹಾಯದಿಂದ ಸಮಿತಿ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಲಾಗುವುದು ಎಂದರು.ಮುಖ್ಯ ಅತಿಥಿಗಳಾಗಿ ಉದ್ಯಮಿ ಡಾ.ಪದ್ಮನಾಭ ವಿ ಶೆಟ್ಟಿ ಮುಂಬೈ, ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಉದ್ಯಮಿಗಳಾದ ಪ್ರೇಮಾನಂದ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಕೆಂಚನಕೆರೆ, ಶ್ರೀಪತಿ ಭಟ್, ಅತಿಕಾರಿಬೆಟ್ಟು ಗ್ರಾ. ಪಂ ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರುಕಾರ್ಯಕ್ರಮದಲ್ಲಿ ಸುಮಾರು 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪೂರ್ವಿಕ ಹರೀಶ್, ಹೃಷಿಕ್ ಉಮೇಶ್ ಶೆಟ್ಟಿ, ತ್ರಿಶಾ, ಅನಿಶಾರವರಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…