ಇಂಡೋ, ಪಾಕ್ ವಧು- ವರರ ಸರಳವಾಗಿ ವಿವಾಹ ಮಾಡಿಕೊಂಡಿದ್ದಾರೆ.
ರಾಜಸ್ಥಾನದ ಜೋಧ್‌ಪುರ ಮೂಲದ ಅರ್ಬಾಜ್ ಪಾಕಿಸ್ತಾನದ ಮೂಲದ ವಧು ಅಮೀನಾ ಅವರೊಂದಿಗೆ ವಿವಾಹವಾಗಿದ್ದಾರೆ.
ಎರಡೂ ಕುಟುಂಬದವರ ಸಹಮತದೊಂದಿಗೆ ಈ ವಿವಾಹ ನೆರವೇರಿದೆ. ವಿಶೇಷವೆಂದರೆ ವರ್ಚುವಲ್ ಮೂಲಕ ( ವಿಡಿಯೊ ಕಾಲ್) ವಿವಾಹ ಕಾರ್ಯಕ್ರಮ ನೆರವೇರಿದೆ.
ಲೈವ್ ಹಿಂದೂಸ್ತಾನ್ ವರದಿ ಮಾಡಿರುವ ಪ್ರಕಾರ ಅರ್ಬಾಜ್ ಹಾಗೂ ಅಮೀನಾ ಅವರ ಕುಟುಂಬ ಸಂಬAಧಿಗಳಾಗಿದ್ದಾರೆ. ಈ ಹಿಂದೆ ಅರ್ಬಾಜ್ ಅವರ ಕುಟುಂಬದ ವ್ಯಕ್ತಿಯೊಬ್ಬರು ಪಾಕಿಸ್ತಾನದಲ್ಲಿರುವ ಅಮೀನಾ ಅವರ ಕುಟುಂಬದ ಯುವತಿಯನ್ನು ಮದುವೆಯಾಗಿದ್ದಾರೆ.
“ನನ್ನ ಮೊಮ್ಮಗ ಚಾರ್ಟಡ್ ಅಕೌಂಟೆAಟ್ ಆಗಿದ್ದಾರೆ. ಪಾಕ್ ಮೂಲದ ಯುವತಿಯನ್ನು ವಿವಾಹವಾಗಿರುವ ಅವರ ಸಂತೋಷವನ್ನು ಅಮೀನಾ ಅವರ ಕುಟುಂಬದವರು ನೋಡಿ, ನನ್ನ ಮಗನನ್ನು ಅಮೀನಾ ಅವರಿಗೆ ಕೊಟ್ಟು ಮದುವೆ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ನಾವು ಒಪ್ಪಿ, ಈ ಮದುವೆಯನ್ನು ಮಾಡಿಸಿದ್ದೇವೆ” ಎಂದು ಅರ್ಬಾಜ್ ಅವರ ತಂದೆ ಮೊಹಮ್ಮದ್ ಅಫ್ಜಲ್ ಅವರು ಹೇಳುತ್ತಾರೆ.
ಅರ್ಬಾಜ್ ಅವರ ಮದುವೆ ದಿಬ್ಬಣ ಜೋಧ್‌ಪುರದ ಓಸ್ವಾಲ್ ಸಮಾಜ ಭವನಕ್ಕೆ ತೆರಳಿ, ಅಲ್ಲಿ ವರ್ಚುವಲ್ ಮೂಲಕ ಪಾಕ್ ನಲ್ಲಿರುವ ಅಮೀನಾ ಅವರೊಂದಿಗೆ ನಿಕಾ ಮಾಡಿಕೊಂಡಿದ್ದಾರೆ. ಅತ್ತ ಕಡೆಯ ಮೌಲ್ವಿ, ಇತ್ತ ಗಂಡಿನ ಕಡೆಯ ಮೌಲ್ವಿಗಳು ವಿವಾಹವನ್ನು ನೆರವೇರಿಸಿದ್ದಾರೆ.
ಈ ವರ್ಚುವಲ್ ಮದುವೆಗೂ ಮುನ್ನ ಅಮೀನಾ ಅವರು ವೀಸಾಕ್ಕಾಗಿ ಸರ್ಜಿ ಸಲ್ಲಿಸಿದ್ದರು. ಆದರೆ ಅದು ವಿಫಲವಾದ ಕಾರಣ. ವರ್ಚುವಲ್ ವಿವಾಹ ನೆರವೇರಿದೆ. ನಾನು ಪಾಕ್ ಗೆ ತೆರಳಿ ವಿವಾಹವಾಗಿಲ್ಲ. ಹಾಗೆ ಮಾಡಿದ್ದರೆ ಅದು ಮಾನ್ಯ ಆಗುತ್ತಿರಲಿಲ್ಲ. ನಮ್ಮ ವಿವಾಹದ ಪ್ರಮಾಣ ಪತ್ರವನ್ನು ಮೌಲ್ವಿಗಳಿಂದ ಪಡೆದುಕೊಂಡಿದ್ದೇವೆ. ಅಮೀನಾ ಅವರ ಭಾರತೀಯ ವೀಸಾ ಆದ ಬಳಿಕ ನಾವು ಮತ್ತೆ ಮರುಮದುವೆ ಆಗಲಿದ್ದೇವೆ ಎಂದು ವೃತ್ತಿಯಲ್ಲಿ ಡಿಟಿಪಿ ಆಪರೇಟರ್ ಆಗಿರುವ ಅರ್ಬಾಜ್ ಹೇಳುತ್ತಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…