ಮೂಡುಬಿದಿರೆ: ‘ಹೋಮಿಯೋಪಥಿ ಪರ್ಯಾಯ ವೈದ್ಯಕೀಯ ಪದ್ಧತಿಯೇ?’ -ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಪಟ್ಟಣದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಪ್ರೊವಿನಿಯೋ-3′ ರಾಷ್ಟ್ರೀಯ-ವಿಚಾರ ಸಂಕಿರಣ’ವನ್ನು ಶುಕ್ರವಾರ ಉದ್ಘಾಟಿಸಿದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಶ್ನಿಸಿದರು.
ಆಗ ವಿಚಾರಸಂಕಿರಣದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ವೈದ್ಯರು, ವೈದ್ಯಕೀಯ ಪ್ರಾಧ್ಯಾಪಕರೆಲ್ಲ ‘ಅಲ್ಲ’ ಎಂದು ಉತ್ತರಿಸಿದರು. ಪ್ರಾಧ್ಯಾಪಕರೊಬ್ಬರು ಎದ್ದು ನಿಂತು ಹೋಮಿಯೋಪಥಿ ಮಹತ್ವವನ್ನು ವಿವರಿಸಿದರು.
‘ನಾನು ಈ ಪ್ರಶ್ನೆಯನ್ನು ಉದ್ದೇಶಪೂರ್ವಕವಾಗಿಯೇ ಕೇಳಿದ್ದೇನೆ. ಯಾವತ್ತೂ ನಾವು ಅನುಸರಿಸುವ ವೃತ್ತಿ ಬಗ್ಗೆ ನಮಗೆ ದೃಢ ವಿಶ್ವಾಸ ಇರಬೇಕು. ಅದನ್ನೇ ಆದ್ಯತೆಯನ್ನಾಗಿ ಮಾಡಬೇಕು. ಅದು ಪರ್ಯಾಯ ಅಲ್ಲ. ಅನನ್ಯ’ ಎಂದು ಮುಗಿಲನ್ ತಿಳಿಸಿದರು.
‘ಆಯುಷ್ (ಆಯುರ್ವೇದ, ಹೋಮಿಯೋಪಥಿ, ಯುನಾನಿ ಇತ್ಯಾದಿ) ವೈದ್ಯಕೀಯ ಪದ್ಧತಿ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಕಡಿಮೆ ಇದೆ. ಹೀಗಾಗಿ, ತಪ್ಪು ಗ್ರಹಿಕೆ ಉಂಟಾಗಿದೆ. ಇವುಗಳನ್ನು ಹೋಗಲಾಡಿಸುವುದೂ ಈ ವೈದ್ಯಕೀಯ ಪದ್ಧತಿ ಅನುಸರಿಸುವವರ ಕರ್ತವ್ಯ’ ಎಂದು ಸಲಹೆ ನೀಡಿದರು.
‘ಸಾಮಾನ್ಯ ಜನರಿಗೂ ಆರೋಗ್ಯ ಕೈಗೆಟಕುವಂತೆ ಮಾಡುವುದು ಆಡಳಿತದ ಆದ್ಯತೆ. ಈ ನಿಟ್ಟಿನಲ್ಲಿ ಹೋಮಿಯೋಪಥಿ ಮತ್ತಿತರ ವೈದ್ಯಕೀಯ ಪದ್ಧತಿ ಜನರಿಗೆ ನೆರವಾಗುತ್ತಿವೆ’ ಎಂದರು.
‘ದಕ್ಷಿಣ ಕನ್ನಡವು ಶಿಕ್ಷಣ ಸೇರಿದಂತೆ ಹಲವು ಹೊಸತನಗಳಿಗೆ ಮೊದಲಿಗ ಆಗಿರುವುದು ನಮ್ಮೆಲ್ಲರ ಹೆಮ್ಮೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಾರ್ಯಕ್ರಮಗಳೂ ಶ್ರೇಷ್ಠಮಟ್ಟದಲ್ಲಿ ಇರುತ್ತವೆ’ ಎಂದು ಶ್ಲಾಘಿಸಿದರು.
‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಚಿತ ಕನ್ನಡ ಶಿಕ್ಷಣ, ಸಾಂಸ್ಕೃತಿಕ- ಕ್ರೀಡಾ ಕ್ಷೇತ್ರದ ಕೊಡುಗೆಯು ಪ್ರಶಂಸನೀಯ. ಡಾ.ಮೋಹನ ಆಳ್ವ ಅವರು ವಿದ್ಯಾರ್ಥಿ ಜೀವನದಲ್ಲೇ ಎಲ್ಲರ ಜೊತೆ ಸಾಮರಸ್ಯ, ಸಹಬಾಳ್ವೆಯನ್ನು ಹೊಂದಿದ್ದರು’ ಎಂದರು.
ಯೆನೆಪೋಯಾ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಮೊಹಮ್ಮದ್ ಫಂರ್ಹಾದ್ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಜ್ಞಾನಾರ್ಜನೆ ಜೊತೆ ಸಹಬಾಳ್ವೆಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು. ಕಲಿಯುವ ಶಿಸ್ತಿನ ಬಗ್ಗೆ ಹೆಮ್ಮೆ ಇರಬೇಕು’ ಎಂದರು.
‘ರೋಗಿ ಜೊತೆ ಮಾತನಾಡಲೂ ಸಮಯ ಇಲ್ಲದಂತೆ ಹಲವು ವೈದ್ಯರು ವರ್ತಿಸುತ್ತಾರೆ. ರೋಗಿಯನ್ನು ಮನುಷ್ಯನಂತೆ ಕಾಣದವರು ಹಲವರಿದ್ದಾರೆ. ರೋಗಿ ಜೊತೆ ಮಾನವೀಯ ಸಂಬಂಧ ಬಹುಮುಖ್ಯ’ ಎಂದರು.
‘ಆಳ್ವಾಸ್ ಒಂದು ಸಾಂಸ್ಕೃತಿಕ ಬದುಕಿನ ಕಲಿಕೆಯ ಕೇಂದ್ರ. ಡಾ.ಮೋಹನ ಆಳ್ವ ಅವರು ಪಿತೃಸ್ವರೂಪದ ಮಾದರಿ ವ್ಯಕ್ತಿತ್ವ’ ಎಂದು ಬಣ್ಣಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಕೆ. ಇದ್ದರು.
ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ರೋಶನ್ ಪಿಂಟೊ ಸ್ವಾಗತಿಸಿದರು. ಕಾರ್ಯಕ್ರಮ ಆಯೋಜನಾ ಕಾರ್ಯದರ್ಶಿ ಡಾ. ಮೋನಿಕಾ ಲೋಬೊ ವಂದಿಸಿದರು.
ಕೇರಳ, ತಮಿಳುನಾಡು, ಮಹಾರಾಷ್ಟç, ರಾಜಸ್ತಾನ, ಮಣಿಪುರ, ಗುಜರಾತ್ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ 1045ಪ್ರತಿನಿಧಿಗಳು ಪಾಲ್ಗೊಂಡಿದ್ದರು.
11 ವೈದ್ಯಕೀಯ ಔಷಧಾಲಯ ಪ್ರದರ್ಶನಗಳು, ೩೦ಕ್ಕೂ ಹೆಚ್ಚು ಭಿತ್ತಿಚಿತ್ರಗಳು, 12ಪ್ರಬಂಧಗಳು ಮಂಡನೆ ನಡೆದವು. ಆಳ್ವಾಸ್ ಹೋಮಿಯೋಪಥಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಯಿತು. 80ಕ್ಕೂ ಅಧಿಕ ಹಿರಿಯ ವಿದ್ಯಾರ್ಥಿಗಳಿದ್ದರು. ಆಳ್ವಾಸ್ ಸಾಂಸ್ಕೃತಿಕ ತಂಡವು ಪ್ರದರ್ಶನ ನೀಡಿತು. ದೇಶದ ವಿವಿಧೆಡೆಯ 10ಕ್ಕೂ ಹೆಚ್ಚು ಹೋಮಿಯೋಪಥಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ 120ಕ್ಕೂ ಹೆಚ್ಚು ವೈದ್ಯಕೀಯ ಪ್ರಾಧ್ಯಾಪಕರು ಹಾಗೂ ವೃತ್ತಿಪರರು ಪಾಲ್ಗೊಂಡರು.
ಬಳಿಕ ನಡೆದ ಗೋಷ್ಠಿಯಲ್ಲಿ ಬೆಂಗಳೂರಿನ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಡಾ. ವಿಜಯ ಕೃಷ್ಣ ವಿ. `ತೀವ್ರ ಕಾಯಿಲೆಗಳಲ್ಲಿ ಹೋಮಿಯೋಪಥಿ ಚಿಕಿತ್ಸಾ ವಿಧಾನಗಳ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಮಾತನಾಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…