ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್ ಅವರ ಬಿಡುಗಡೆಯ ಸಾಧ್ಯತೆಯಿದೆ.
2022ರ ನವೆಂಬರ್‌ನಿoದ ಸೌದಿಯ ರಿಯಾದ್‌ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು, ಚಂದ್ರಶೇಖರ್ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್ ಹಾಗೂ ಜೈಲಿಗೆ ನೀಡಬೇಕಾಗಿದೆ.
ಈ ಕೆಲಸವನ್ನು ರಿಯಾದ್‌ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್‌ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್‌ನಲ್ಲಿರುವ ಮೊಬೈಲ್ ಅಂಗಡಿಯೊAದಕ್ಕೆ ತೆರಳಿದ್ದಾರೆ.
ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂದ 2 ಬಾರಿ ತಂಬ್ ಅನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊoದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.
ಚoದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್‌ವೊoದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.
ಹ್ಯಾಕರ್‌ಗಳ ಕುಕೃತ್ಯದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿoದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…