ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..
ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.
ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…