ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.
ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…