ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಘಟಕ ಮುಖ್ಯಸ್ಥ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ, ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡು ಕಾಂಗ್ರೆಸ್ ಘಟಕದ ಮುಖ್ಯಸ್ಥರಾಗುವ ಸಾಧ್ಯತೆಗಳು ಹೆಚ್ಚಿವೆ.ಇವರು 2017 ರಂದು ದ.ಕ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಪ್ರಸಕ್ತ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್.ಅಳಗಿರಿ ಅವರ ಅಧಿಕಾರಾವಧಿ ಈಗಾಗಲೇ ಪೂರ್ಣಗೊಂಡಿದೆ. ಆದಾಗ್ಯೂ, ಪಕ್ಷದ ಮೇಲಿನ ಅವರ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್ ನಿರ್ಧರಿಸಿದೆ. ಏತನ್ಮಧ್ಯೆ, ತಮಿಳು ನಾಡು ಕಾಂಗ್ರೆಸ್ ಸಮಿತಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸಲಾಗಿದ್ದು, ಮೊದಲನೇ ವಿಭಾಗವನ್ನು ಅಳಗಿರಿ, 2ನೇ ವಿಭಾಗವನ್ನು ಸಿಎಲ್‌ಪಿ ನಾಯಕ ಸೆಲ್ವಪೆರು ತುಂಗೈ ಮುನ್ನಡೆಸುತ್ತಿದ್ದಾರೆ. ಮೂರನೇ ವಿಭಾಗದ ಉಮೇದುವಾರಿಕೆ ಯನ್ನು ಸೆಂಥಿಲ್ ಅವರಿಗೆ ನೀಡುವ ಪ್ರಸ್ತಾಪವಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!