ದಕ್ಷಿಣ ಕನ್ನಡ : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ಸುರತ್ಕಲ್ ಕುತ್ತೆತ್ತೂರು ಆದಿವಾಸಿ ಭವನದಲ್ಲಿ ದ.ಕ.ಜಿಲ್ಲಾ ಕೊರಗರ ಸಂಘ ಆಯೋಜಿಸಿದ ಕೊರಗರ ಭೂಮಿ ಹಬ್ಬ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮುಖ್ಯವಾಹಿನಿಯಲ್ಲಿ ಸಾಗುವಂತಾಗಲು ಆರ್ಥಿಕ ಹಾಗೂ ಸಾಮಾಜಿಕ ಸ್ಪಂದನೆ ಅಗತ್ಯವಾಗಿದೆ ಎಂದವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ.ಕ.ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ.ಸುಂದರ ಕೊರಗ ಅವರು ಮಾತನಾಡಿ, ಕೊರಗರ ಐತಿಹಾಸಿಕ ಚಳವಳಿಯ ನೆನಪಿನಲ್ಲಿ ಈ ಕೊರಗರ ಭೂಮಿ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ನೆನಪಿಸಿದರು.
ಕೊರಗ ಸಂಘಟನೆಯ ಮಾಜಿ ಅಧ್ಯಕ್ಷ ಬಾಲರಾಜ್ ಕೋಡಿಕಲ್ ಸಮುದಾಯದ ಚಳವಳಿ ನಡೆದು ಬಂದ ದಾರಿಯನ್ನು ಉಲ್ಲೇಖಿಸಿ ಚಳವಳಿ ಕೊರಗರ ಬದುಕನ್ನು ಬದಲಾಯಿಸಿದ ಮಹತ್ವದ ಮೈಲಿಗಲ್ಲು ಎಂದು ಹೇಳಿದರು.
ಉಡುಪಿ ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ ಕೆಂಜೂರು ಅವರು ಮಾತನಾಡಿ, ಕೊರಗ ಸಮುದಾಯದ ಹೋರಾಟವು ಮಹಿಳೆಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು ಎಂದು ಹೇಳಿದರು.
ಲೇಖಕ ಬಾಬು ಪಾಂಗಳ ಅವರು ಭೂಮಿ ಹಬ್ಬದ ಸಂದೇಶ ನೀಡಿದರು. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸುರೇಶ್ ಅಡಿಗ , ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಹೇಮಚಂದ್ರ ಅವರು ಶುಭಕೋರಿ ಮಾತನಾಡಿದರು.
ಬಾಳಾ ಪಂಚಾಯತ್ ಅಧ್ತಕ್ಷ ಶಂಕರ್ ಜೋಗಿ , ಉಪಾಧ್ಯಕ್ಷೆ ಲಕ್ಷ್ಮಿ ಶುಭಕೋರಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯದ ಗುರಿಕಾರರಾದ ಜಬ್ಬ ಗುರಿಕಾರ ಬಳ್ಕುಂಜ , ನಾರಾಯಣ ಸಿರಿಗೆನ್ನಾರ್ , ರಾಜು ಗುರಿಕಾರ ಕತ್ತಲ್ ಸಾರ್ , ಸಮುದಾಯದ ಹಿರಿಯ ಮಹಿಳೆಯರಾದ ಲಲಿತಾ ಕೃಷ್ಣಾಪುರ, ಸುಮತಿ ಬಂಟ್ವಾಳ ಅವರನ್ನು ಸನ್ಮಾನಿಸಲಾಯಿತು.
ರಮೇಶ್ ಗುಂಡಾವು ಕಾರ್ಯಕ್ರಮ ನಿರ್ವಹಿಸಿದರು. ಮನೋಜ್ ಕೋಡಿಕಲ್ ಸ್ವಾಗತಿಸಿ ವಂದಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…