ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.
ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.
ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…