ಮುಲ್ಕಿ: ಲಯನ್ಸ್ ಇಂಟರ್ನ್ಯಾಷನಲ್317ಡಿ ವತಿಯಿಂದ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ (ಎಸ್ ಎಫ್ ಎ) ಮುಲ್ಕಿ ಲಯನ್ಸ್ ಸೌಧದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜೀ ರಾಜ್ಯಪಾಲ ಡಾ. ಹರಿಕೃಷ್ಣ ಪುನರೂರು ಮಾತನಾಡಿ ವಿದ್ಯಾರ್ಥಿಗಳು ಡ್ರಗ್ಸ್ ಮತ್ತಿತರ ದುಷ್ಟ ಚಟಗಳಿಂದ ದೂರವಿದ್ದರೆ ದೇಶದ ಅಭಿವೃದ್ಧಿ ಸಾಧ್ಯವಾಗಿದ್ದು, ಭವ್ಯ ಭಾರತ ನಿರ್ಮಾಣ ಶಿಕ್ಷಕರಿಂದ ಸಾಧ್ಯ ಎಂದರು.
ಲಯನ್ ರಾಜ್ಯಪಾಲ ಮೆಲ್ವಿನ್ ಡಿಸೋಜಾ ಮಾತನಾಡಿ ಎಳವೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉನ್ನತ ಸ್ಥಾನಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ಪಾತ್ರ ಮಹತ್ವದ್ದು, ಮಹಿಳೆಯರಿಗೆ ಸಮಾನತೆಯ ಮೂಲಕ ನಾಯಕತ್ವ ನೀಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಖಂಡಿತ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ಮಾಜೀ ರಾಜ್ಯಪಾಲರಾದ ಕವಿತಾ ಶಾಸ್ತ್ರಿ, ಕ್ಯಾಬಿನೆಟ್ ಸೆಕ್ರೆಟರಿ ಸುಧಾಕರ ಶೆಟ್ಟಿ, ಆರ್.ಸಿ. ಉಷಾ ಮನೋಜ್, ಝಡ್ ಸಿ ಸುಜಿತ್ ಸಾಲ್ಯಾನ್, ಮಂದಾಕಿನಿ, ಮಾಜೀ ಅಧ್ಯಕ್ಷೆ ನೀರಜಾ ಅಗರ್ವಾಲ್, ಶೋಭಾ ಸುಜಿತ್, ಲಿಯೋ ಸಿಯಾ ಸುಶೀಲ್, ಕವನ್ ಕುಬೆವೂರು, ಕಿಶೋರ್ ಶೆಟ್ಟಿ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರ್ಯಗಾರದಲ್ಲಿ ಭಾಗವಹಿಸಿದ ಶಿಕ್ಷಕಿಯರನ್ನು ಗೌರವಿಸಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…