ಜನ ಮನದ ನಾಡಿ ಮಿಡಿತ

Advertisement

ನಟ ಪ್ರಕಾಶ್ ರಾಜ್‌ನ ಮತ್ತೊಂದು ಅವಾಂತರ; ಚಂದ್ರಯಾನ-3 ಗೆ ಅವಮಾನ; ವ್ಯಾಪಕ ಅಕ್ರೋಶ

ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.


ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.


ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.


ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್‌ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.


ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!