ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.
ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.
ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್‌ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…