ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಹಾವು ಕಚ್ಚಿದ ವ್ಯಕ್ತಿಯನ್ನು 1,307 ಕಿ.ಮೀ ದೂರದ ಆಸ್ಪತ್ರೆಗೆ ಕರೆತಂದರು..!

ಯಾರಿಗಾದರೂ ಹಾವು ಕಚ್ಚಿದರೆ ಕೂಡಲೇ ಅವರನ್ನು ತುರ್ತು ಚಿಕಿತ್ಸೆ ನೀಡಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ.


ಆದರೆ ಇಲೊಬ್ಬರು ಹಾವು ಕಚ್ಚಿ ಚಿಕಿತ್ಸೆ ಪಡೆಯಲು 1,307 ಕಿ.ಮೀ ದೂರ ಪ್ರಯಾಣಿಸಿ ಆಸ್ಪತ್ರೆಗೆ ಬಂದಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಸುನಿಲ್ ಕುಮಾರ್ (20) ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಾರೆ.
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡುತ್ತಿದ್ದ ವೇಳೆ ಸುನಿಲ್ ಅವರಿಗೆ ಹಾವೊಂದು ಕಚ್ಚಿದ್ದು, ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಹಾವು ಕಡಿತದಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಕೆಲ ಸಮಯದ ಬಳಿಕ ಅವರು ಪ್ರಜ್ಞೆ ತಪ್ಪಿದ್ದಾರೆ.

ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಚಿಂತಿತರಾಗಿದ್ದು, ಸುನಿಲ್ ಅವರ ಚಿಕಿತ್ಸೆಗೆ 1,307 ಕಿ.ಮೀ ದೂರವಿರುವ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಕುಟುಂಬದ ಸದಸ್ಯರು ಗುಜರಾತ್‌ನಲ್ಲಿ 51,000 ರೂಪಾಯಿಗಳಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ಂಐS) ಆಂಬ್ಯುಲೆನ್ಸ್ನ್ನು ಬಾಡಿಗೆಗೆ ಪಡೆದಿದ್ದಾರೆ. ರೋಗಿಯನ್ನು ಕಾನ್ಪುರಕ್ಕೆ ಕರೆತರಲು 1,307 ಕಿಮೀ ದೂರ ಪ್ರಯಾಣಿಸಿ ಎಲ್‌ಎಲ್‌ಆರ್ ಆಸ್ಪತ್ರೆ ತಲುಪಿದ ಕೂಡಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಗಿದೆ.

ವೈದ್ಯರ ನಿರಂತರ ಪ್ರಯತ್ನದಿಂದ ರೋಗಿ ಚೇತರಿಕೆ ಕಾಣಲು ಆರಂಭಿಸಿದ್ದು, ಶನಿವಾರ ವೆಂಟಿಲೇಟರ್ ಸಪೋರ್ಟ್ ನ್ನು ತೆಗೆಯಲಾಗಿದೆ ಎಂದು ಎಲ್ ಎಲ್ ಆರ್ ನ ಹಿರಿಯ ವೈದ್ಯ ಡಾ.ಬಿ.ಪಿ. ಹೇಳಿದ್ದಾರೆ.

“ಆ.17 ರಂದು ರಾತ್ರಿ ಆಸ್ಪತ್ರೆಗೆ ಬರುವಾಗ ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹಾವಿನ ವಿಷವು ದೇಹದಲ್ಲಿ ವಿಷಕಾರಿ ಪರಿಣಾಮವನ್ನು ಬೀರಿತ್ತು. ಆ್ಯಂಟಿ ವೆನಮ್ ಮತ್ತಿತರ ಔಷಧಗಳನ್ನು ನೀಡಲಾಯಿತು. ಇದೀಗ ಸುನಿಲ್ ಸ್ಥಿತಿ ಸುಧಾರಿಸಿದೆ. ಅವರನ್ನು ವೆಂಟಿಲೇಟರ್‌ನಿoದ ಹೊರತೆಗೆದು ಐಸಿಯು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಅವರ ಜೀವ ಈಗ ಅಪಾಯದಿಂದ ಪಾರಾಗಿದೆ’ʼ ಎಂದು ವೈದ್ಯ ಪ್ರಿಯದರ್ಶಿ ಹೇಳಿದ್ದಾರೆ

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!