ಯಾರಿಗಾದರೂ ಹಾವು ಕಚ್ಚಿದರೆ ಕೂಡಲೇ ಅವರನ್ನು ತುರ್ತು ಚಿಕಿತ್ಸೆ ನೀಡಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ.
ಆದರೆ ಇಲೊಬ್ಬರು ಹಾವು ಕಚ್ಚಿ ಚಿಕಿತ್ಸೆ ಪಡೆಯಲು 1,307 ಕಿ.ಮೀ ದೂರ ಪ್ರಯಾಣಿಸಿ ಆಸ್ಪತ್ರೆಗೆ ಬಂದಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಸುನಿಲ್ ಕುಮಾರ್ (20) ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಾರೆ.
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮಾಡುತ್ತಿದ್ದ ವೇಳೆ ಸುನಿಲ್ ಅವರಿಗೆ ಹಾವೊಂದು ಕಚ್ಚಿದ್ದು, ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಹಾವು ಕಡಿತದಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಕೆಲ ಸಮಯದ ಬಳಿಕ ಅವರು ಪ್ರಜ್ಞೆ ತಪ್ಪಿದ್ದಾರೆ.
ಅವರ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಚಿಂತಿತರಾಗಿದ್ದು, ಸುನಿಲ್ ಅವರ ಚಿಕಿತ್ಸೆಗೆ 1,307 ಕಿ.ಮೀ ದೂರವಿರುವ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಕುಟುಂಬದ ಸದಸ್ಯರು ಗುಜರಾತ್‌ನಲ್ಲಿ 51,000 ರೂಪಾಯಿಗಳಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ಂಐS) ಆಂಬ್ಯುಲೆನ್ಸ್ನ್ನು ಬಾಡಿಗೆಗೆ ಪಡೆದಿದ್ದಾರೆ. ರೋಗಿಯನ್ನು ಕಾನ್ಪುರಕ್ಕೆ ಕರೆತರಲು 1,307 ಕಿಮೀ ದೂರ ಪ್ರಯಾಣಿಸಿ ಎಲ್‌ಎಲ್‌ಆರ್ ಆಸ್ಪತ್ರೆ ತಲುಪಿದ ಕೂಡಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಆರಂಭಿಸಲಾಗಿದೆ.
ವೈದ್ಯರ ನಿರಂತರ ಪ್ರಯತ್ನದಿಂದ ರೋಗಿ ಚೇತರಿಕೆ ಕಾಣಲು ಆರಂಭಿಸಿದ್ದು, ಶನಿವಾರ ವೆಂಟಿಲೇಟರ್ ಸಪೋರ್ಟ್ ನ್ನು ತೆಗೆಯಲಾಗಿದೆ ಎಂದು ಎಲ್ ಎಲ್ ಆರ್ ನ ಹಿರಿಯ ವೈದ್ಯ ಡಾ.ಬಿ.ಪಿ. ಹೇಳಿದ್ದಾರೆ.
“ಆ.17 ರಂದು ರಾತ್ರಿ ಆಸ್ಪತ್ರೆಗೆ ಬರುವಾಗ ಅವರ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹಾವಿನ ವಿಷವು ದೇಹದಲ್ಲಿ ವಿಷಕಾರಿ ಪರಿಣಾಮವನ್ನು ಬೀರಿತ್ತು. ಆ್ಯಂಟಿ ವೆನಮ್ ಮತ್ತಿತರ ಔಷಧಗಳನ್ನು ನೀಡಲಾಯಿತು. ಇದೀಗ ಸುನಿಲ್ ಸ್ಥಿತಿ ಸುಧಾರಿಸಿದೆ. ಅವರನ್ನು ವೆಂಟಿಲೇಟರ್‌ನಿoದ ಹೊರತೆಗೆದು ಐಸಿಯು ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಅವರ ಜೀವ ಈಗ ಅಪಾಯದಿಂದ ಪಾರಾಗಿದೆ’ʼ ಎಂದು ವೈದ್ಯ ಪ್ರಿಯದರ್ಶಿ ಹೇಳಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…