ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್‌ನಲ್ಲಿ ಜೆಸಿಬಿ ಬಳಸಿಕೊಂಡು ಕಳ್ಳತನಕ್ಕೆ ಯತ್ನಿಸಿದ ನಾಲ್ವರು ಕಳ್ಳರು ಪೊಲೀಸರ ವಶ..!


ಜೆಸಿಬಿ ಬಳಸಿಕೊಂಡು ಸುರತ್ಕಲ್‌ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್ ಹೆಚ್ (20), ನಾಗರಾಜ ನಾಯ್ಕ್ (21) ಮತ್ತು ಧನರಾಜ್ ನಾಯ್ಕ್ (22) ಎಂದು ತಿಳಿದು ಬಂದಿದೆ.


ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್ ಬೈಕ್ ಹಾಗೂ 2 ಆಂಡ್ರೋಯ್ಡ್ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಅಂತರ್ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್‌ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!