ಜೆಸಿಬಿ ಬಳಸಿಕೊಂಡು ಸುರತ್ಕಲ್‌ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್ ಹೆಚ್ (20), ನಾಗರಾಜ ನಾಯ್ಕ್ (21) ಮತ್ತು ಧನರಾಜ್ ನಾಯ್ಕ್ (22) ಎಂದು ತಿಳಿದು ಬಂದಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್ ಬೈಕ್ ಹಾಗೂ 2 ಆಂಡ್ರೋಯ್ಡ್ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಅಂತರ್ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್‌ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…