ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆಯ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ ಇವರನ್ನು ಮಧ್ಯ ರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಪೋಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.
ಈ ಸಂಧರ್ಭದಲ್ಲಿ ಹಿಂ.ಜಾ ವೇ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಾಮದಾಸ್ ಬಂಟ್ವಾಳ ಮಾತನಾಡಿದರು, ಹಾಗೂ ಪ್ರಮುಖರಾದ ರವಿರಾಜ್ ಬಿ.ಸಿ. ರೋಡ್, ರತ್ನಾಕರ ಶೆಟ್ಟಿ, ಮಂಗಳೂರು ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಪ್ರಮುಖರಾದ ಸಮಿತ್ ರಾಜ್ ದರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜೀಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪು ಗುಡ್ಡೆ ತಾಲೂಕು ಕಾರ್ಯಕರ್ತರು ಮತ್ತು ಪರಿವಾರದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…