ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ಅಧ್ಯಕ್ಷ ರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆಯಾಗಿದ್ದಾರೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಭಾಂಗಣದಲ್ಲಿ ನಡೆದ 2022 – 23ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಡಾ. ರಾಜಶೇಖರ್ ಕೋಟ್ಯಾನ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಇತರ ಪದಾದಿಕಾರಿಗಳು: ಉಪಾಧ್ಯಕ್ಷರುಗಳಾಗಿ ಸೂರ್ಯಕಾಂತ್ ಜಯ ಸುವರ್ಣ,ಹರೀಶ್ ಡಿ ಸಾಲ್ಯಾನ್ ಬಜೆಗೋಳಿ,
ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಜೊತೆ ಕಾರ್ಯದರ್ಶಿಗಳಾಗಿ ಗಣೇಶ್ ಪೂಜಾರಿ ಗಂಜಿಮಠ,ಶಿವಾಜಿ ಸುವರ್ಣ ಬೆಳ್ಳೆ, ಕೋಶಾಧಿಕಾರಿಯಾಗಿ ಕೆ. ಪ್ರಭಾಕರ ಬಂಗೇರ ಕಾರ್ಕಳ, ಜೊತೆ ಕೋಶಾಧಿಕಾರಿ ಗಣೇಶ ಎಲ್. ಪೂಜಾರಿ ಬೈಂದೂರು ಆಯ್ಕೆಯಾಗಿರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚಂದ್ರಶೇಖರ ಸುವರ್ಣ ಮೈಸೂರು ಮತ್ತು ಹರಿಶ್ಚಂದ್ರ ಅಮೀನ್ ಕಟಪಾಡಿ ನಡೆಸಿಕೊಟ್ಟರು.
ನೂತನ ಅಧ್ಯಕ್ಷರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ರಮೇಶ್ ಅಮೀನ್ ಕೊಕ್ಕರಕಲ್,ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌ ವೆಂಕಟೇಶ ಹೆಬ್ಬಾರ್
ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್,ಗೌತಮ್ ಜೈನ್ ಮುಲ್ಕಿ ಅರಮನೆ, ಕಾಂಗ್ರೆಸ್ ನಾಯಕರಾದ ಧನಂಜಯಮಟ್ಟು ,ದಯಾನಂದ ಮಟ್ಟು, ಕಿಶೋರ್ ಶೆಟ್ಟಿ ಬಪ್ಪನಾಡು ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…