ಮಂಗಳೂರು: ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ಜಗಳವಾಡುತ್ತಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ವೈಯಕ್ತಿಕ ವಿಚಾರವಾಗಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಜಗಳವಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕ ನೆಮ್ಮದಿಗೆ ಭಂಗವಾಗಿದ್ದು ಸ್ಥಳೀಯರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಜ್ಪೆ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಎಂದು ಪೊಲೀಸರು ತಿಳಿಸಿದ್ದಾರೆ.



