ಮಂಗಳೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಇದೇ ಬರುವ ಆಗಸ್ಟ್ 26ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ರವೀಂದ್ರನಾಥ ರೈ ಹೇಳಿದ್ದಾರೆ.
ಇವರು ಬಲ್ಮಠದಲ್ಲಿರುವ ಹೋಟೆಲ್ ಕ್ವಾಲಿಟಿಯ ಮೂರನೇ ಮಹಡಿಯ ಕುಡ್ಲ ಪೆವಿಲಿಯನ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್, ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ನಿಟ್ಟೆ ವಿವಿ ಕುಲಪತಿ ಡಾ. ಎನ್. ವಿನಯ್ ಹೆಗ್ಡೆ, ಮಂಗಳೂರು ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ಎ. ಜೆ. ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈಯ ಉದ್ಯಮಿ ಪಾದೆ ಅಜಿತ್ ರೈ, ಸಂಗೀತ ನಿರ್ದೇಶಕ ಗುರುಕಿರಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇಂಟರ್ ನೇಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಎಂ.ಆರ್.ಜಿ ಗ್ರೂಪ್ ನ ವ್ಯವಸ್ಥಾಪಕ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.
ಸಮಾರಂಭದ ಅಂಗವಾಗಿ ಮಧ್ಯಾಹ್ನ 3 ಕ್ಕೆ ಪ್ರಸಿದ್ಧ ಗಾಯಕರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.



