ಮೂಡುಬಿದಿರೆ: ತನ್ನ ಕರ್ತವ್ಯದ ಮೂಲಕ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ‘ಖಡಕ್ ಖಾಕಿ’ ಎಂದೇ ಕರೆಸಿಕೊಂಡಿರುವ ಸಂದೇಶ್ ಪಿ. ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂದಿದ್ದಾರೆ.
ಕಳೆದ ಹಲವು ಸಮಯಗಳಿಂದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಆಗಿ ಸಂದೇಶ್ ಅವರು ಬರುತ್ತಾರೆನ್ನುವ ಮಾಹಿತಿ ಇತ್ತಾದರೂ ಇಂದು ಅದು ಅಧಿಕೃತಗೊಂಡಿದೆ..
ಈ ಹಿಂದೆ ಕಾರ್ಕಳ, ಬೆಳ್ತಂಗಡಿ, ಬಜ್ಪೆ ಹಾಗೂ ಇನ್ನಿತರ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸಂದೇಶ್ ಅವರು ತಮ್ಮ ದಕ್ಷತೆಯ ಕರ್ತವ್ಯದ ಮೂಲಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದರು. ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಕಾನೂನು ಹೇಗಿದೆಯೋ ಅದನ್ನು ಪಾಲಿಸಿ ಕೊಂಡು ಬಂದು, ಕಾನೂನಿಗೆ ಭಂಗತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸಂದೇಶ್ ಅವರ ಸ್ವಭಾವ. ಇದೇ ಕಾರಣಕ್ಕೆ ಕಳ್ಳರು, ದರೋಡಕೋರರು, ಕಾನೂನು ಕೈಗೆತ್ತಿಕೊಳ್ಳುವವರಿಗೆ ಸಿಂಹಸ್ವಪ್ನರಾಗಿದ್ದಾರೆ.
ಇ0ತಹ ದಕ್ಷ ಅಧಿಕಾರಿ ಮೂಡುಬಿದಿರೆಗೊಮ್ಮೆ ಬರಲೇ ಬೇಕೆನ್ನುವುದು ಈ ಭಾಗದ ಜನರ ಆಶಯವಾಗಿತ್ತು. ಇದೀಗ ಓರ್ವ ನಿಷ್ಠಾವಂತ, ದಕ್ಷ ಅಧಿಕಾರಿ ಮೂಡುಬಿದಿರೆಯ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೂಡುಬಿದಿರೆಗೆ ಸಂದೇಶ್ ರಂತಹ ಖಡಕ್ ಅಧಿಕಾರಿಯ ಅವಶ್ಯವಿತ್ತು. ಇನ್ನು ಕೆಲವು ಕ್ರೈಮ್, ಅಕ್ರಮ ಚಟುವಟಿಕೆಗಳು, ಮಾದಕ ವ್ಯಸನಿಗಳಿಗೆ, ಉಂಡಾಡಿಗು0ಡರಾಗಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಮೂಡುಬಿದಿರೆಯಲ್ಲಿ ಖಂಡಿತ ಅವಕಾಶ ವಿಲ್ಲ ಎನ್ನುವ ಅಭಿಪ್ರಾಯಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಮೂಡುಬಿದಿರೆಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ನಿರಂಜನ್ ಅವರು ಸಕಲೇಶಪುರ ಗ್ರಾಮಾಂತರ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…