ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಡಾ. ರಾಜೇಂದ್ರ ಕುಮಾರ್ ಜೈನ್ ರವರಿಂದ ಪಡೆದ ಸಂಘದ ಅಧಿಕಾರಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸತತ ನಾಲ್ಕನೇ ಬಾರಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರು ಹಾಗೂ ಬಂಟ್ವಾಳ ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ನಿವೃತ್ತಿ ಹೊಂದಿದ ಕಾರ್ಯದರ್ಶಿ ಲಕ್ಶ್ಮೀಶ್ ರೈ ಅವರು ಪಡೆದುಕೊಂಡಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ನೂತನ ಕಾರ್ಯನಿರ್ವಹಣಾಧಿಕಾರಿ ಹಾಗೂ ಬಂಟ್ವಾಳ ಬಂಟರ ಸಂಘದ ಮಹಿಳಾ ಕಾರ್ಯಕಾರಿ ಸಮಿತಿಯ ಸದಸ್ಯೆ ಸಂದ್ಯಾ ಯು. ಶೆಟ್ಟಿ ಉಪಸ್ಥಿತರಿದ್ದರು.




