
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪ್ರಗ್ಯಾನ್ ರೋವರ್ ಅನ್ನು ಚಂದ್ರಯಾನ-3 ಮಿಷನ್‌ನ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಬಳಿಕ ಗುರುವಾರ ಚಂದ್ರನ ಮೇಲ್ಮೈ ನಲ್ಲಿ ಇಳಿದಿರುವ ವಿಕ್ರಮ್ ಲ್ಯಾಂಡರ್ ನಿಂದ ಪ್ರಗ್ಯಾನ್ ರೋವರ್ ಹೊರಬಂದಿದ್ದು ತನ್ನ ಅನ್ವೇಷಣೆಯನ್ನು ಪ್ರಾರಂಭಿಸಿದೆ.
ವಿಕ್ರಮ್ ಲ್ಯಾಂಡರ್‌ನಿಂದ ಹೊರಬಂದ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿರುವುದಾಗಿ ಇಸ್ರೊ ಟ್ವೀಟ್ ಮಾಡಿದೆ. ಚಂದಿರನ ಮೇಲೆ 14 ದಿನಗಳ ಕಾಲ ರೋವರ್ ಮಿಷನ್ ಕೈಗೊಳ್ಳಲಿದ್ದು, ಸಂಶೋಧನೆ ನಡೆಸಲಿದೆ ಎನ್ನಲಾಗಿದೆ.



