ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ, ಅನಿತಾ ಡಿಸಿಲ್ವಾ ರ ಸಂಬಂಧಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಬಂಧಿತ ಆರೋಪಿಯಾಗಿದ್ದಾನೆ.
ಈತನಿಂದ 6,90,713 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
33.720 ಗ್ರಾಂ. ತೂಕದ ಚಿನ್ನದ ಕರಿಮಣಿ ಸರ, 30.040 ಗ್ರಾಂ. ತೂಕದ 3 ಚಿನ್ನದ ಬಳೆಗಳು, 24.240 ಗ್ರಾಂ. ತೂಕದ 9 ಚಿನ್ನದ ಉಂಗುರಗಳು, 28.590 ಗ್ರಾಂ. ತೂಕದ 5ಚಿನ್ನದ ಸರ, 4.760 ಗ್ರಾಂ. ತೂಕದ 2 ಬ್ರಾಸ್ ಲೈಟ್, 7.880 ಗ್ರಾಂ. ತೂಕದ ೩ ಕಿವಿಯೋಲೆ, 0.920 ಗ್ರಾಂ. ತೂಕದ 1 ಚಿನ್ನದ ಕ್ರಾಸ್, ನಗದು 36,370 ರೂ., ಮೊಬೈಲ್ ಪೋನ್ ಮತ್ತು ಕಪ್ಪು ಬಣ್ಣದ ಡಿಯೋ ಸ್ಕೂಟರ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಡುಪಿ ಎಸ್ಪಿ ಅಕ್ಷಯ್ ಎಂ. ಹಾಕೆ, ಹೆಚ್ಚುವರಿ ಎಸ್ಪಿ ಎಸ್. ಟಿ. ಸಿದ್ದಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ನೇತೃತ್ವದಲ್ಲಿ ಕಾಪು ಕ್ರೈಂ ಎಸ್ಸೈ ಪುರುಷೋತ್ತಮ್ ಸಹಕಾರದೊಂದಿಗೆ ಅಪರಾಧ ಪತ್ತೆ ತಂಡದ ಪ್ರವೀಣ ಕುಮಾರ್ ಕಾಪು ವೃತ್ತ, ರಾಜೇಶ್ ಪಡುಬಿದ್ರಿ ಠಾಣೆ, ನಾರಾಯಣ ಕಾಪು ಠಾಣೆ, ಶ್ರೀಧರ್, ಸುಧಾಕರ್ ಮತ್ತು ಚಾಲಕ ಪ್ರಸಾದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



