ಜನ ಮನದ ನಾಡಿ ಮಿಡಿತ

Advertisement

ಉದ್ಯಾವರ: ಮನೆಕಳ್ಳತನದ ಆರೋಪಿ ಸೆರೆ – ಚಿನ್ನಾಭರಣ, ನಗದು ವಶ

ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ, ಅನಿತಾ ಡಿಸಿಲ್ವಾ ರ ಸಂಬಂಧಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಬಂಧಿತ ಆರೋಪಿಯಾಗಿದ್ದಾನೆ.

ಈತನಿಂದ 6,90,713 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

33.720 ಗ್ರಾಂ. ತೂಕದ ಚಿನ್ನದ ಕರಿಮಣಿ ಸರ, 30.040 ಗ್ರಾಂ. ತೂಕದ 3 ಚಿನ್ನದ ಬಳೆಗಳು, 24.240 ಗ್ರಾಂ. ತೂಕದ 9 ಚಿನ್ನದ ಉಂಗುರಗಳು, 28.590 ಗ್ರಾಂ. ತೂಕದ 5ಚಿನ್ನದ ಸರ, 4.760 ಗ್ರಾಂ. ತೂಕದ 2 ಬ್ರಾಸ್ ಲೈಟ್, 7.880 ಗ್ರಾಂ. ತೂಕದ ೩ ಕಿವಿಯೋಲೆ, 0.920 ಗ್ರಾಂ. ತೂಕದ 1 ಚಿನ್ನದ ಕ್ರಾಸ್, ನಗದು 36,370 ರೂ., ಮೊಬೈಲ್ ಪೋನ್ ಮತ್ತು ಕಪ್ಪು ಬಣ್ಣದ ಡಿಯೋ ಸ್ಕೂಟರ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಡುಪಿ ಎಸ್ಪಿ ಅಕ್ಷಯ್ ಎಂ. ಹಾಕೆ, ಹೆಚ್ಚುವರಿ ಎಸ್ಪಿ ಎಸ್. ಟಿ. ಸಿದ್ದಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ನೇತೃತ್ವದಲ್ಲಿ ಕಾಪು ಕ್ರೈಂ ಎಸ್ಸೈ ಪುರುಷೋತ್ತಮ್ ಸಹಕಾರದೊಂದಿಗೆ ಅಪರಾಧ ಪತ್ತೆ ತಂಡದ ಪ್ರವೀಣ ಕುಮಾರ್ ಕಾಪು ವೃತ್ತ, ರಾಜೇಶ್ ಪಡುಬಿದ್ರಿ ಠಾಣೆ, ನಾರಾಯಣ ಕಾಪು ಠಾಣೆ, ಶ್ರೀಧರ್, ಸುಧಾಕರ್ ಮತ್ತು ಚಾಲಕ ಪ್ರಸಾದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!