ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.
ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…