ದಕ್ಷಿಣ ಕನ್ನಡ: ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಸಮಾಜದ ಸ್ವಾಸ್ಥ್ಯ ಕೆಡಲು ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಸಮ್ಮತ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವವರ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.ಪ್ಯಾಕ್ಟ್ ಚೆಕ್ ಘಟಕವು , ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮುಖಾಂತರ ಸುಳ್ಳು ಸುದ್ದಿ ಪ್ರಸಾರವನ್ನ ಪತ್ತೆ ಹಚ್ಚಿ, ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…