2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಮಾತನಾಡಿರುವ ಅವರು, ಚಂದ್ರನ ಅಂಗಳದಲ್ಲಿ ಇಳಿದಿರುವ ರೋವರ್ ಪ್ರಜ್ಞಾನ್ನಲ್ಲಿ ರಸಾಯನಿಕ ಸಂಯೋಜನೆ ಅಧ್ಯಯನಕ್ಕೆ ಸಂಬಂಧಿಸಿದ ಎರಡು ಉಪಕರಣಗಳಿವೆ. ಚಂದ್ರನ ಮೇಲ್ಮೈ ಮೇಲೆ ರಸಾಯನಿಕ ಸಂಯೋಜನೆ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈ ಮೇಲೆ ರೋವರ್ ಸಂಚಾರ ನಡೆಯಲಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಸೆಪ್ಟೆಂಬರ್ನಲ್ಲಿ ಉಡಾವಣೆ ಆಗಲಿದೆ. ಗಗನಯಾನದ ಕೆಲಸ ಇನ್ನೂ ನಡೆಯುತ್ತಿದೆ. ಮಾನವ ಸಹಿತ ಗಗನಯಾನ 2025 ಕ್ಕೆ ಸಾಧ್ಯವಾಗಲಿದೆ ಎಂದರು.
ಇನ್ನು ಚಂದ್ರಯಾನ-3 ಬಗ್ಗೆ ಮಾತನಾಡಿ, ನಾವು ಚಂದ್ರನ ದಕ್ಷಿಣ ದ್ರುವದ ಹತ್ತಿರಕ್ಕೆ ಹೋಗಿದ್ದೇವೆ. ದಕ್ಷಿಣ ಧ್ರುವ ಬಹುತೇಕ 70 ಡಿಗ್ರಿಯಲ್ಲಿದೆ. ದಕ್ಷಿಣ ಧ್ರುವದಲ್ಲಿ ಕೆಲವೊಂದು ಅನುಕೂಲಗಳಿವೆ. ಸೂರ್ಯನ ಬೆಳಕು ಕಡಿಮೆ ಬೀಳುತ್ತದೆ. ದಕ್ಷಿಣ ಧ್ರುವದಲ್ಲಿ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಂಶಗಳಿವೆ. ಚಂದ್ರನ ಬಗ್ಗೆ ಅಧ್ಯಯನ ಮಾಡುವ ವಿಜ್ಞಾನಿಗಳು ದಕ್ಷಿಣ ಧ್ರುವದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…