ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ: ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ಪುರಸಭೆ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ

ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕದ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿದರು.


ಪುರಸಭೆ ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಬಿಗಡಾಯಿಸಿದೆ. ಪರಿಸರ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವ ಆಸಕ್ತಿ ತೋರುತ್ತಿಲ್ಲ. ಅವರು ಕಚೇರಿಯಲ್ಲೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಸುರೇಶ್ ಪ್ರಭು, ಪುರಂದರ ದೇವಾಡಿಗ, ಸುರೇಶ್ ಕೋಟ್ಯಾನ್, ಪಿ.ಕೆ ಥೋಮಸ್, ಕೊರಗಪ್ಪ ಜಿಲ್ಲಾಧಿಕಾರಿಗೆ ದೂರು ನೀಡಿದರು. ನಂತರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಯೋಜನಾ ನಿರ್ದೇಶಕ ಅಭಿಷೇಕ್ ಅವರು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ರೈತರ ಹಾಗೂ ಪಂಚಾಯಿತಿ ಗಮನಕ್ಕೆ ತಾರದೆ ಯುಪಿಟಿಸಿಎಲ್‌ನವರು ಬಲವಂತದ ಕಾಮಗಾರಿ ಆರಂಭಿಸಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿ ಉಂಟಾಗುತ್ತಿದ್ದು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪುತ್ತಿಗೆ , ಪಾಲಡ್ಕ, ಕಡಂದಲೆ, ಮಿತ್ತೂರು ಹಾಗೂ ಕುಪ್ಪೆಪದವು ರೈತರು ಮತ್ತು ಜನಪ್ರತಿನಿಧಿಗಳು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಕೆಪಿಟಿಸಿಎಲ್ ನಿಯಮಾನಮುಸಾರ ಕಾಮಗಾರಿ ನಡೆಸುತ್ತಿದೆ, ಸಂತ್ರಸ್ಥರಿಗೆ ಸಿಗಬೇಕಾದ ಪರಿಹಾರದಲ್ಲಿ ಅನ್ಯಾಯವಾದಲ್ಲಿ ಪರಿಶೀಲಿಸುತ್ತೇನೆ ಎಂದರು.

ಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಹಾಗೂ ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆ ಮನವಿ ಸಲ್ಲಿಸಿತು. ಇಂದಿರಾ ಕ್ಯಾಂಟೀನ್ ತೆರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರ್‌ಗೆ ಸೂಚಿಸಿದರು. ಸಹಾಯಕ ಕಮಿಷನರ್ ಹರ್ಷವರ್ಧನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಪುರಸಭೆ ಮುಖ್ಯಾಧಿಕಾರಿ ಶಿವ ನಾಯ್ಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳಿಗೆ ಸಂಬAಧಿಸಿದ 34 ಅರ್ಜಿಗಳು ಸಲ್ಲಿಕೆಯಾದವು.


ಮಾರಿಂಜಗುಡ್ಡೆಯ ಘನತ್ಯಾಜ್ಯ ನಿರ್ವಹಣೆ ಘಟಕದ ಸಮಸ್ಯೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಸಭೆಯಲ್ಲಿ ಪುರಸಭೆ ಸದಸ್ಯರು ಮತ್ತು ಗ್ರಾಮಸ್ಥರಿಗೆ ಜಿಲ್ಲಾಧಿಕಾರಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಸ್ಥಳೀಯರು ಮತ್ತು ಪತ್ರಕರ್ತರು ಸ್ಥಳಕ್ಕೆ ತೆರಳಿ ಸುಮಾರು ಎರಡು ತಾಸು ಕಾದು ಕುಳಿತರೂ ಜಿಲ್ಲಾಧಿಕಾರಿ ಭೇಟಿ ನೀಡದೆ ತೆರಳಿದ್ದು ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ಅಸಮಧಾನಗೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!