ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ. ಕೃಷಿ ಕೆಲಸ ಮಾಡಿಕೊಂಡಿದ್ದವರು ಪ್ರತಿಮೆ ಧ್ವಂಸ ಮಾಡಿದ ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ. ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆ ಮರು ಸ್ಥಾಪನೆ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…