ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿಯೇ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದಿರುವ ಘಟನೆ ನಡೆದಿದೆ.
ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ.
ಮೂರರಿಂದ ನಾಲ್ಕು ಭಾರೀ ಚುರಿ ಇರಿದು ಕತ್ತು ಸೀಳಿದ್ದಾನೆ. ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಯುವತಿಯ ಸ್ಧಿತಿ ಚಿಂತಾಜನಕವಾಗಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ . ಚೂರಿ ಇರಿತಕ್ಕೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…