ಜನ ಮನದ ನಾಡಿ ಮಿಡಿತ

Advertisement

ಯುವತಿಗೆ ಚೂರಿ ಇರಿತ : ಆರೋಪಿ ಪದ್ಮರಾಜ್ ಬಂಧನ

ಪುತ್ತೂರು ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ) ಎಂದು ಗುರುತಿಸಲಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ವ್ಯಕ್ತಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಇಲ್ಲಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಸಂಭವಿಸಿತ್ತು.
ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಪದ್ಮರಾಜ್ ಚೂರಿಯಿಂದ ಇರಿದು ಪರಾರಿಯಾಗಿದ್ದ.

ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದು, ಯುವತಿಯ ಸ್ಧಿತಿ ಚಿಂತಾಜನಕವಾಗಿದೆ. ಯುವತಿ ಸರಕಾರಿ ಬಸ್‌ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಳು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!