ದಕ್ಷಿಣ ಕನ್ನಡ : ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತ್ಯಾಜ್ಯ ಸಮಸ್ಯೆ ಮಿತಿಮೀರಿದೆ, ಒಂದೆಡೆ ಮಂಗಳೂರು ಮಹಾನಗರ ಪಾಲಿಕೆ ಶ್ರಮಪಟ್ಟು ತ್ಯಾಜ್ಯ ವಿಲೇವಾರಿಯನ್ನು ಮಾಡುಲು ಪ್ರಯತ್ನಿಸಿರುವಾಗಲೇ ಇದ್ದ ಕೆಲವೊಂದು ನಾಗರಿಕರು ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದ್ದಾರೆ. ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮತ್ತು ದಂಡ ವಿಧಿಸುವುದಾಗಿ ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಮಂಗಳೂರಿನಲ್ಲಿ ಕಟ್ಟಡ ತ್ಯಾಜ್ಯವನ್ನು ಫುಟ್‌ಪಾತ್‌ಗೆ ಎಸೆದ ವ್ಯಕ್ತಿಗೆ ಮಂಗಳೂರು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂಪಾಯಿ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ವ್ಯಕ್ತಿಯೊಬ್ಬರು ತ್ಯಾಜ್ಯವನ್ನು ತಂದು ಫುಟ್ ಪಾತ್ ನಲ್ಲಿ ಸುರಿದಿದ್ದರು. ಇದರ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ದರವೆಂದು 4 ಸಾವಿರ ದಂಡ ವಸೂಲು ಮಾಡಿದೆ.ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಯಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗುತ್ತದೆ.
ಇದರಿಂದ ನಗರದ ಸೌಂದರ್ಯ ಹಾಗೂ ಸ್ವಚ್ಛತೆಗೆ ದಕ್ಕೆಯಾಗುತ್ತಿದೆ.ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…