ಹದಿನೈದು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಸೋಮನಾಥ (47) ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ನಿವಾಸಿಯಾಗಿರುವ ಸೋಮನಾಥ ಅಗಸ್ಟ್ 7 ರಂದು ಗ್ರಾಮದ ಮಾನಡ್ಕ ಎಂಬಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದ ವೇಳೆ ಮರದಗೆಲ್ಲು ಕಡಿಯುವಾಗ ಅಯತಪ್ಪಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 22ರಂದು ನಿಧನರಾಗಿದ್ದಾರೆ.



