ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್ನಿಂದ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್ ನಾಯಕರು ಗೇಲಿ ಮಾಡಿದ್ದಾರೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್ಎಸ್ಎಸ್ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿದ್ದಾರೆ
ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವಿಟ್ ಮಾಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…