ಸಿವಿಯರ್ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.
ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್ ಆಲ್ಫಾ ಬೀಟಾ ಡಿಪ್ಲೀಷನ್ ಎಂದು ಕರೆಯಲ್ಪಡುವ ಸ್ಟೆಮ್ ಸೆಲ್ ಗ್ರಾಫ್ಟ್ ಮ್ಯಾನಿಪ್ಯುಲೇಶನ್ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.
ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.
ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್-ಡಿಪ್ಲೀಟೆಡ್ ಹ್ಯಾಪ್ಲೋಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…