ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದ ಮನೆಯೊಂದರ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ಕಳವು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ.


ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ.


ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು.
ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ.


ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ , ಶ್ವಾನದಳ,ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!