ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಇರಾದಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ.
ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು.
ಇಂದು ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ , ಶ್ವಾನದಳ,ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…