ಜನ ಮನದ ನಾಡಿ ಮಿಡಿತ

Advertisement

ಕೊಯಿಲ ಸರಕಾರಿ ಪ್ರೌಢಶಾಲೆ; ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ


ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ ಯಕ್ಷಧ್ರುವಯಕ್ಷ ಶಿಕ್ಷಣ” ಅಭಿಯಾನದಡಿಯಲ್ಲಿ ಇಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷ ತರಬೇತಿಯ ಉದ್ಘಾಟನೆ ನಡೆಯಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಸರಪಾಡಿ ಅಶೋಕ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಅವರು ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಹಿಲಾರಿ ಡಿಸೋಜ, ರಂಗಭೂಮಿ ಕಲಾವಿದ ರತ್ನದೇವ್ ಪುಂಜಾಲಕಟ್ಟೆ,ಶಿಕ್ಷಕರಾದ ಧನಂಜಯ, ಜ್ಯೋತಿ, ಆಶಾಲತಾ, ಪ್ರಶ್ಮಿತ, ಸುಶ್ಮಿತ ಅವರು ಉಪಸ್ಥಿತರಿದ್ದರು. ಯಕ್ಷ ಗುರು ಪ್ರೇಮರಾಜ್ ಕೊಯಿಲ ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಗತಿ ಪ್ರಾರಂಭಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸೌಮ್ಯಾ ಎಚ್. ಸ್ವಾಗತಿಸಿದರು.‌
ಸಹ ಶಿಕ್ಷಕರಾದ ಪ್ರವೀಣ್ ಕಾಮತ್ ವಂದಿಸಿದರು. ರಮೇಶ್ ಮಯ್ಯ ಕಾರ್ಯಕ್ರಮ‌ ನಿರೂಪಿಸಿದರು. 83 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!