ಜನ ಮನದ ನಾಡಿ ಮಿಡಿತ

Advertisement

ವಾಮದಪದವು : ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ, ನ್ಯಾಯಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ, ಪಾದಯಾತ್ರೆ


ಬಂಟ್ವಾಳ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ ಸೂಕ್ತ ನ್ಯಾಯ ಒದಗಿಸಲು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ವಾಮದಪದವು ಸಮಾನ ಮನಸ್ಕರ ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ಜರಗಿತು.
ಸೌಜನ್ಯಾ ಸಹೋದರಿ ಸೌಹಾರ್ಧಾ ಮತ್ತು ತಾಯಿ ಕುಸುಮಾವತಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ಜಾನಪದ ವಿದ್ವಾಂಸ, ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳುನಾಡು ಸತ್ಯ, ಧರ್ಮ, ನ್ಯಾಯದ ಬೀಡು. ತುಳುನಾಡಿನ ದೈವಶಕ್ತಿಗಳು ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವುದು ಖಂಡಿತ. ಅಪರಾಧಿಗಳಿಗೆ ಸ್ತ್ರೀ ಶಾಪ ತಟ್ಟುವುದು ಎಂದರು. ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಅನಿಲ್‌ಕುಮಾರ್ ಮಾತನಾಡಿ, ಸೌಜನ್ಯಾ ಪ್ರಕರಣದಲ್ಲಿ ತನಿಖಾಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ ನ್ಯಾಯ ದೊರಕದಿರುವುದು ವಿಪರ್ಯಾಸ ಎಂದರು.


ಸೌಜನ್ಯಾ ತಾಯಿ ಕುಸುಮಾವತಿ ಅವರು ಮಾತನಾಡಿ, ನನ್ನ ಮಗಳಿಗಾದ ಅನ್ಯಾದ ವಿರುದ್ಧ ಕಳೆದ ೧೧ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ನಮಗೆ ನ್ಯಾಯ ಒದಗಿಸಲು ಸಹಕರಿಸಿ ಎಂದರು.
ಹೋರಾಟ ಸಮಿತಿ ಸಂಚಾಲಕ ದೇವೀಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಸೌಜನ್ಯಾ ಪರ ಪ್ರತೀ ಗ್ರಾಮಗಳಲ್ಲಿ ಹೋರಾಟ ನಡೆಯಬೇಕು. ಆ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ಸೌಜನ್ಯಾ ತಾಯಿ ಮತ್ತು ಕುಟುಂಬ ಹಾಗೂ ಪ್ರತಿಭಟನಕಾರರು ಸೌಜನ್ಯಾ ಅತ್ಯಾಚಾರಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಒದಗಿಸುವಂತೆ ಕೋರಿ ಸಭೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು.ಸೌಜನ್ಯಾ ಕುರಿತ ಹಾಡನ್ನು ಪಂಚಮಿ ಹಾಡಿದರು.


ಹೋರಾಟ ಸಮಿತಿಯ ಯತೀಶ್ ಶೆಟ್ಟಿ ವಿಜಯನಗರ ಅವರು ಸ್ವಾಗತಿಸಿದರು. ಭರತ್ ಕಾವು ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮುನ್ನ ವಾಮದಪದವು ನೀಲಿ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಮಾವಿನಕಟ್ಟೆ ಮೈದಾನದವರೆಗೆ ಘೋಷಣೆಗಳೊಂದಿಗೆ ಪ್ರತಿಭಟನಕಾರರು ಪಾದಯಾತ್ರೆ ನಡೆಸಿದರು. ಬಂಟ್ವಾಳ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಪುಂಜಾಲಕಟ್ಟೆ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾನೂನು ಸುವ್ಯವಸ್ಥೆಗೆ ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!