ಮುಲ್ಕಿ: ” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮಂಡಲ (ರಿ) ಹಳೆಯಂಗಡಿ ಇವರ ವತಿಯಿಂದ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮಂಡಲ ( ರಿ) ಹಳೆಯಂಗಡಿ ಇವರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇವರ ಸಹಕಾರದಲ್ಲಿ ಆದಿತ್ಯವಾರದಂದು ಅಪರಾಹ್ನ 3 ರಿಂದ ಕೋಡಿಹಿತ್ಲು ಗದ್ದೆ 10ನೇ ತೋಕೂರು ಇಲ್ಲಿ ಯುವತಿ ಮಂಡಲದ ಸದಸ್ಯರಿಂದ ‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮಣ್ ಕೋಟ್ಯಾನ್ ಇವರು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕೃಷಿ ಆಸಕ್ತಿ ಹೆಚ್ಚುತ್ತಿದ್ದು ಬಹಳ ಸಂತಸದ ವಿಷಯ. ಕೃಷಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯ ಮುಂದಿನ ದಿನಗಳಲ್ಲಿಯೂ ಕೂಡ ಹಿರಿಯರ ಮಾರ್ಗದರ್ಶನದಲ್ಲಿ ಯುವಕ ಯುವತಿಯರು ನಡೆಸಿಕೊಂಡು ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷರಾದ ರಶ್ವಿತಾ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ಕೋಟ್ಯಾನ್ ಹಾಗೂ ಸದಸ್ಯರಾದ ಸುಶ್ಮಿತಾ, ಕಾತ್ಯಾಯಿನಿ, ನಿಶ್ಮಿತಾ, ಜಯಶ್ರೀ, ಪ್ರಣವಿ, ಧನ್ಯ, ಶ್ವೇತಾ, ಮೇಘನಾ ಮತ್ತು ನಿತ್ಯಾನಂದ, ಲೋಹಿತ್, ನೀಲೇಶ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…