ಭಾರತದ ಚಿನ್ನದ ಹುಡುಗ ಖ್ಯಾತಿಯ ವಿಶ್ವಮಟ್ಟ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೀರಜ್ ಚೋಪ್ರಾ ಭಾನುವಾರ ಬುಡಾಪೆಸ್ಟ್‌ನಲ್ಲಿ ನಡೆದ ಪುರುಷರ ಜಾವೆಲಿನ್ ಥ್ರೋ ಫೈನಲ್ ಸ್ಪರ್ಧೆಯಲ್ಲಿ ಎರಡನೇ ಪ್ರಯತ್ನದಲ್ಲಿ ಜಾವೆಲಿನ್ ಅನ್ನು 88.17 ಮೀಟರ್‌ಗಳ ದೂರಕ್ಕೆ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಪಂದ್ಯದ ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.

ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್‌ಗಳಷ್ಟು ದೂರ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದರೆ . ಇನ್ನೊಂದೆಡೆಗೆ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ 86.67 ಮೀ ದೂರದಲ್ಲಿ ಕಂಚಿನ ಪದಕ ಪಡೆದರು.



