ಜನ ಮನದ ನಾಡಿ ಮಿಡಿತ

Advertisement

ಕೈಯಲ್ಲಿ ಮಾರಕಾಸ್ತ್ರ, ತಲೆಗೆ ಹೆಲ್ಮೆಟ್​.. ಮೆಡಿಕಲ್​ ಶಾಪ್​ಗೆ ನುಗ್ಗಿ ದರೋಡೆ 

ಮೆಡಿಕಲ್ ಶಾಪ್​​ಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದರೋಡೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಮೆಡಿಕಲ್​ ಶಾಪ್​ ಒಳನುಗ್ಗಿ ಯುವತಿಯ ಬಳಿ ಹಣ ಕೇಳಿದ್ದಾನೆ. ಈ ವೇಳೆ ಯುವತಿ ಹಣ ಕೊಡಲು ನಿರಾಕರಿಸಿದ್ದಾಳೆ. ತಕ್ಷಣವೇ ತನ್ನ ಬಳಿ ಇದ್ದ ಆಯುಧದಿಂದ ಯುವತಿಗೆ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಭಯಗೊಂಡ ಯುವತಿ ಕೂಡಲೇ ಡ್ರಾಯರ್ ಓಪನ್ ಮಾಡಿದ್ದ ಹಣ ನೀಡಿದ್ದಾಳೆ. ಆರೋಪಿ ದುಡ್ಡು ದೋಚಿ ಎಸ್ಕೇಪ್ ಆಗಿದ್ದಾನೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಹೆಬ್ಬಗೋಡಿ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!