ಕರಾವಳಿ

ಸೌಜನ್ಯಾ ಪ್ರಕರಣ; ಚಲೋ ಬೆಳ್ತಂಗಡಿ ಧರಣಿ..!

ಬೆಳ್ತಂಗಡಿ; ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ ಸಂಬ0ಧ ಪ್ರತಿಭಟನೆಗೆ ಇಳಿಯುವ ಬದಲು ಬಿಜೆಪಿಗರು ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರವನ್ನು ಆಗ್ರಹಿಸಲಿ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.


ಇವರು ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂದು ಕೇಂದ್ರ ಹಾಗೂ ರಾಜ್ಯ ದಲ್ಲಿದ್ದ ಬಿಜೆಪಿ ಸರಕಾರಗಳು ನಿರಪರಾಧಿಯನ್ನು ಅಪರಾಧಿಯೆಂದು ಬಿಂಬಿಸಿ ತನಿಖೆಯ ದಾರಿ ತಪ್ಪಿಸಿದವು. ಈಗ ಪ್ರತಿಭಟನೆ ನಡೆಸುವುದನ್ನು ಬಿಟ್ಟು ಮರು ತನಿಖೆಗೆ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಲಿ ಎಂದರು.


ಇನ್ನೂ ಇದೇ ವೇಳೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಸೌಜನ್ಯಾ ಪ್ರಕರಣ ನ್ಯಾಯಾಂಗ ಸುಪರ್ದಿಯಲ್ಲೇ ತನಿಖೆಯಾಗಬೇಕು ಎಂದರು.

ರಾಜ್ಯ ಜನಪರ ಸಂಘಟನೆಗಳ ವೇದಿಕೆ ಸಂಚಾಲಕ ಬಿ.ಎಂ. ಭಟ್ ಮಾತನಾಡಿ, ಸಿಬಿಐ ಕೋರ್ಟ್ ತನಿಖೆ ಯಲ್ಲಿನ ಲೋಪಗಳನ್ನು ಉಲ್ಲೇಖ ಮಾಡಿದೆ. ಸಂಸದರು ಲೋಕಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕೇ ಹೊರತು ಪ್ರತಿಭಟನೆಯಲ್ಲಿ ಅಲ್ಲ ಎಂದರು.

ಇನ್ನೂ ಈ ಸಂದರ್ಭದಲ್ಲಿ ಜನವಾದಿ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ಡಾ| ಮೀನಾಕ್ಷಿ ಬಾಳಿ, ಉಪಾಧ್ಯಕ್ಷೆ ನೀಲಾ, ಸೌಜನ್ಯಾ ತಾಯಿ ಕುಸುಮಾವತಿ, ಪ್ರೊ| ನರೇಂದ್ರ ಎಲ್. ನಾಯಕ್, ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ಹೋರಾಟಗಾರ್ತಿ ಕೆ.ಎಸ್.ವಿಮಲಾ, ವಕೀಲ ಶ್ರೀನಿವಾಸ್, ಕಾಂಗ್ರೆಸ್‌ನ ಶ್ಯಾಲೆಟ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಮತ್ತಿತರರು ಮರು ತನಿಖೆಗೆ ಆಗ್ರಹಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

33 mins ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

42 mins ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

43 mins ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

46 mins ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

51 mins ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

53 mins ago