ರಾಜ್ಯ

ಬರೋಬ್ಬರಿ 174 ಕಿ.ಮೀ ರಿವರ್ಸ್ ಟ್ರ‍್ಯಾಕ್ಟರ್ ಓಡಿಸಿದ ಯುವಕ; ಭಕ್ತಿ ಅಂದರೆ ಇದಪ್ಪಾ ಶಹಬ್ಬಾಷ್.. ಎಂದ ನೆಟ್ಟಿಗರು

ಸಾಮಾನ್ಯವಾಗಿ ಭಕ್ತರು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಂಡಿರುತ್ತಾರೆ. ಕೆಲವರು ಹಣದ ರೂಪದಲ್ಲಿ ಕೊಟ್ಟರೆ, ಇನ್ನು ಕೆಲವರು ದವಸ-ಧಾನ್ಯ ರೂಪದಲ್ಲಿ ಹರಕೆ ನೀಡುತ್ತಾರೆ. ಆದರೆ ಇಲ್ಲೊಬ್ಬ ಯುವಕ ದೇವರಿಗೆ ರಿವರ್ಸ್ ಟ್ರ‍್ಯಾಕ್ಟರ್ ಓಡಿಸುವ ಹರಕೆ ಕಟ್ಟಿಕೊಂಡಿದ್ದು, ಇದೀಗ ಅದರಂತೆಯೇ ಈ ಹರಕೆಯನ್ನು ಮಾಡಿ ತೀರಿಸಿದ್ದಾನೆ.

ಹೌದು. 25 ವರ್ಷದ ಶಿವನಗೌಡ ಪಾಟೀಲ್ ಎಂಬ ಯುವಕ ಉಳುವಿ ಚನ್ನಬಸವೇಶ್ವರ ದೇವರಿಗೆ ಹರಕೆ ಐದು ವರ್ಷದ ಹಿಂದೆಯೇ ಈ ಹರಕೆಯನ್ನು ಕಟ್ಟಿಕೊಂಡಿದ್ದನು. ಅದರಂತೆಯೇ ನಿನ್ನೆ ದೇವರಿಗೆ ಹರಕೆ ಈಡೇರಿಸಿದ್ದಾನೆ.
16 ತಾಸಿನಲ್ಲಿ 174 ಕಿಮೀ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸುವ ಮೂಲಕಜ ಎಲ್ಲರನ್ನು ಬೆರಗುಗೊಳಿಸಿದ್ದಾನೆ.

ಶಿವನಗೌಡ ಪಾಟೀಲ್ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕನ್ನೂರು ಗ್ರಾಮದಿಂದ ಉಳುವಿಗೆ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಾನೆ. ಹಗಲು ರಾತ್ರಿ ಎನ್ನದ ಸತತವಾಗಿ ಹಿಂಬದಿಯಿAದ ಡ್ರೈವಿಂಗ್ ಮಾಡಿ ಸಾಹಸ ಮೆರೆದಿದ್ದಾನೆ.

ಟ್ರ‍್ಯಾಕ್ಟರ್ ಎಂಜಿನ್ ಚಲಾಯಿಸುವುದೇ ಕಷ್ಟಕರ ಅಂತದ್ರಲ್ಲಿ ಟೇಲರ್ ಸಮೇತ ಪ್ರಯಾಣ ಮಾಡಿದ್ದಾನೆ. ಯುವಕನ ಈ ದಿಟ್ಟ ಸಾಹಸಕ್ಕೆ ಊರಿನ ಹಾಗೂ ತಾಲೂಕಿನ ಜನರು ಫಿದಾ ಆಗಿದ್ದಾರೆ. ಶಹಬ್ಬಾಷ್ ಇದಪ್ಪಾ ಭಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…

4 hours ago

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 day ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 day ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 day ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 day ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

1 day ago