ಜನ ಮನದ ನಾಡಿ ಮಿಡಿತ

Advertisement

ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವ; 100 ರೂಪಾಯಿಯ ವಿಶೇಷ ನಾಣ್ಯ ಬಿಡುಗಡೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಿಗ್ಗಜ ನಟ, ತೆಲುಗು ದೇಶಂ ಸಂಸ್ಥಾಪಕ ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವಕ್ಕಾಗಿ 100 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 100ರ ನಾಣ್ಯ ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ನಂದಮೂರಿ ಬಾಲಕೃಷ್ಣ, ರಾಮಕೃಷ್ಣ, ಭುವನೇಶ್ವರಿ, ಪುರಂದರೇಶ್ವರಿ ಸೇರಿದಂತೆ ಎನ್‌ಟಿ ರಾಮರಾವ್ ಅವರ ಪುತ್ರರು ಮತ್ತು ಪುತ್ರಿಯರು ಸೇರಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟಿಡಿಪಿ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಕೂಡ ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರು ಮತ್ತು ಹಲವು ಟಿಡಿಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಎನ್​ಟಿಆರ್​ ಸ್ಮರಣಾರ್ಥ ಹೈದರಾಬಾದ್​​ನಲ್ಲಿರುವ ಭಾರತ ಸರ್ಕಾರದ ಟಂಕಸಾಲೆಯಲ್ಲಿ ಮುದ್ರಿಸಲಾಯಿತು. ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಮುದ್ರಿಸಲಾಗಿದೆ.

ಅಂದಹಾಗೆಯೇ, 100 ರೂಪಾಯಿ ವಿಶೇಷ ನಾಣ್ಯವನ್ನು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಮುದ್ರಿಸಿಲ್ಲ. ಎನ್​ಟಿಆರ್​​ ಅವರಿಗೆ ಗೌರವ ಸೂಚಿಸುವ ಸಲುವಾಗಿ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!