ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನಕ್ಕೆ ಬಿಗ್ ಗಿಫ್ಟ್ ನೀಡಲಿದ್ದಾರೆ.
ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂದಿನ 24 ಗಂಟೆಯಲ್ಲಿ ಎಲ್‌ಪಿಜಿ ಬೆಲೆ ಇಳಿಕೆ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲೇ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂದಿನ ವರ್ಷ ನಡೆಯುವ ಲೋಕಸಭೆ ಹಾಗೂ ವರ್ಷಾಂತ್ಯದಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ಇಳಿಕೆಯ ತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಚುನಾವಣೆಗಳಲ್ಲಿ ಬೆಲೆ ಏರಿಕೆಯು ಪ್ರಮುಖ ವಿಷಯವಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ನಿರ್ಧಾರವನ್ನು ಖಚಿತಪಡಿಸುವ ಸಾಧ್ಯತೆಯಿದೆ.
ಪ್ರಸ್ತುತವಾಗಿ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 1053 ರೂಪಾಯಿ ಇದ್ದು, ಮುಂಬೈನಲ್ಲಿ 899.50 ರೂ ಮತ್ತು ಕೋಲ್ಕತ್ತಾದಲ್ಲಿ 1079 ರೂಪಾಯಿ ಇದೆ. ಇನ್ನು ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಇದ್ದವರಿಗೆ ಮಾತ್ರ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗುತ್ತದೆ ಎನ್ನಲಾಗಿದೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…