ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ರಾಧಾಕೃಷ್ಣ ದೇವಸ್ಥಾನ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 10 ದಿನದ ಕಾರ್ಯಕ್ರಮ, ವೇದಮೂರ್ತಿ ಗಿರಿಧರ ಭಟ್ಟರಿಂದ ಆಹ್ವಾನ

ದಕ್ಷಿಣ ಕನ್ನಡ : ಮಂಗಳೂರು ನಗರದ  ರಾಧಾಕೃಷ್ಣ ದೇವಸ್ಥಾನದ ಆವರಣದಲ್ಲಿರುವ ಬಾಳಂ ಭಟ್ ಹಾಲ್ ನಲ್ಲಿ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದಿನಾಂಕ 31- 08 -2023ರಿಂದ 09- 09- 2023 ವರೆಗೆ ಒಟ್ಟು ಹತ್ತು ದಿನಗಳ  ಧಾರ್ಮಿಕ, ಸಾಂಸ್ಕೃತಿಕ,  ಅಷ್ಟಾವಧಾನ,ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರಾದ ವೇದಮೂರ್ತಿ ಗಿರಿಧರ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

     ದಿನಾಂಕ 31 ರಿಂದ ಹತ್ತು ದಿನಗಳು   ನಿತ್ಯ ಸಾಯಂಕಾಲ ಗಂಟೆ 5 ರಿಂದ  ಭಜನಾ ಸಂಕೀರ್ತನೆ ನಂತರ ಅಷ್ಟಾವಧಾನ ಬಳಿಕ  ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

     ದಿನಾಂಕ 06-09-2023 ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ವಿಶೇಷ ಕಾರ್ಯಕ್ರಮಗಳ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ಗಂಟೆ  8 ರಿಂದ ಹರಿಕಥಾ ಕಾಲಾಮೃತ, ಬಳಿಕ  “ಮುದ್ದುಕೃಷ್ಣ” ಸ್ಪರ್ಧೆ  ಹಾಗೂ “ರಾಧಾಕೃಷ್ಣ” ರೂಪಕ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಕಚೇರಿಯನ್ನು ಅಥವಾ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

      ದಿನಾಂಕ 09-09-2023 ಯಂದು ಪುಷ್ಪಾಲಂಕಾರ ಪೂಜೆ, ಭಜನಾ ಮಂಗಲೋತ್ಸವ ಕಾರ್ಯಕ್ರಮವಿದ್ದು, ಸಮಾಜ ಬಾಂಧವರು, ಭಕ್ತಾದಿಗಳು, ಸಾರ್ವಜನಿಕರು ನಿತ್ಯವೂ  ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರು ವಿನಂತಿಸಿರುತ್ತಾರೆ.  

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!